ಕುಂದಾಪುರ :ನ.12ರಂದು ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವ್ಯವಹಾರದ ದಿನ

0
833

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಬಿಸಿನೆಸ್ ಡೇ ಕಾರ್ಯಕ್ರಮವನ್ನು ನ.12 ಶನಿವಾರ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ರಾಗಿಣಿ ತಿಳಿಸಿದರು.
ಕುಂದಾಪುರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ವ್ಯವಹಾರದ ಜ್ಞಾನವನ್ನು ಪ್ರಾಯೋಗಿಕವಾಗಿ ಕಲಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜನೆಗೊಳ್ಳುತ್ತಿದ್ದು ವಿದ್ಯಾರ್ಥಿಗಳು ತಮ್ಮ ತಮ್ಮ ತಂಡವನ್ನು ರಚನೆ ಮಾಡಿಕೊಂಡು ತಮ್ಮ ಅಭಿರುಚಿಗೆ ತಕ್ಕಂತೆ ಅಂಗಡಿಗಳನ್ನು ತೆರೆದು, ಸಣ್ಣ ಬಂಡವಾಳವನ್ನು ಹೂಡಿ ಲಾಭ ಪಡೆಯುವ ಬಗೆ, ಭಾವನಾತ್ಮಕ, ಸಾಮಾಜಿಕ ಸಂಬಂಧಗಳ ಮೌಲ್ಯವನ್ನು ಅರ್ಥ ಮಾಡಿಕೊಳ್ಳುವುದು, ವಿದ್ಯಾರ್ಥಿಗಳ ಸೃಜನಶೀಲತೆಗೆ ಮೆರಗು ದೊರಕಿಸಲು, ಸ್ವ ಉದ್ಯೋಗದ ಕುರಿತು ಮಾಹಿತಿ, ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ದುಡಿದರೇ ಯಶಸ್ಸು ತಮ್ಮ ಕಡೆ ಒಲಿಯುತ್ತದೆ ಎನ್ನುವುದನ್ನು ಮನವರಿಕೆ ಮಾಡಿ ಕೊಡುವ ನಿಟ್ಟಿನಲ್ಲಿ ಈ ವ್ಯವಹಾರದ ದಿನ ಎನ್ನುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

Click Here

ಈ ಬಿಸಿನೆಸ್ ಡೇ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಅಂದಾಜು 40 ರಿಂದ 45 ಅಂಗಡಿ ಮಳಿಗೆಗಳನ್ನು ತೆರೆಯಲು ಕಾಲೇಜಿನ ವತಿಯಿಂದ ಅವಕಾಶ ಮಾಡಿಕೊಡಲಾಗಿದೆ. ಅದರ ಸದುಪಯೋಗವನ್ನು ಪಡೆದು ವಿದ್ಯಾರ್ಥಿಗಳು ವ್ಯಾಪಾರ ಮಾಡಿ ಬಂದ ಲಾಭಾಂಶವು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿದೀಪವಾಗಬೇಕು ಎನ್ನುವ ದೃಷ್ಟಿಯಲ್ಲಿ ಕೈಗಾರಿಕೆಗಳಿಗೆ ಭೇಟಿ ಏರ್ಪಡಿಸಿ ಅವರ ಜ್ಞಾನ ವೃದ್ಧಿಯಾಗುವಂತೆ ನೋಡಿಕೊಳ್ಳುವುದು. ಆ ಮೂಲಕ ಪಟ್ಟ ಪರಿಶ್ರಮಕ್ಕೆ ಫಲ ದೊರೆಯುತ್ತದೆ. ಎನ್ನುವುದನ್ನು ಮನವರಿಕೆ ಮಾಡಿಕೊಡಲು ಈ ಬಿಸಿನಸ್ ಡೇ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸಲಿದ್ದಾರೆ. ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್ (ರಿ.) ಇದರ ಅಧ್ಯಕ್ಷರಾದ ಕೆ.ರಾಮಕೃಷ್ಣ ಕಾಮತ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ್ ಇದರ ಕಾರ್ಯದರ್ಶಿ ಬಿ.ಪಿ ವರದರಾಯ ಪೈ ಭಾಗವಹಿಸಲಿದ್ದಾರೆ. ವೇದಿಕೆಯಲ್ಲಿ ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್(ರಿ.) ಇದರ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ, ಪ್ರಾಂಶುಪಾಲೆ ಶ್ರೀಮತಿ ರಾಗಿಣಿ, ಆಡಳಿತಾಧಿಕಾರಿ ಪ್ರಭಾಕರ್ ಶ್ಯಾನುಭೋಗ್ ಹಾಗೂ ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಶಿಕ್ಷಕರು ಉಪಸ್ಥಿತರಿರಲಿದ್ದಾರೆ ಎಂದರು.
ಈ ಕಾರ್ಯಕ್ರಮಕ್ಕೆ ಕುಂದಾಪುರ ತಾಲೂಕಿನಲ್ಲಿರುವ ವಿವಿಧ ಪ್ರೌಢಶಾಲೆ, ಕಾಲೇಜು ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಲಿದ್ದಾರೆ. ಸುಮಾರು ಒಂದು ಸಾವಿರಕ್ಕೂ ಮಿಕ್ಕಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಹೊಂದಿದ್ದೇವೆ ಎಂದರು.
ಸುದ್ಧಿಗೋಷ್ಠಿಯಲ್ಲಿ ಆಡಳಿತಾಧಿಕಾರಿ ಪ್ರಭಾಕರ್ ಶ್ಯಾನುಭೋಗ್, ಕಾರ್ಯಕ್ರಮ ಸಂಯೋಜಕರಾದ ಶ್ರೀಮತಿ ಸವಿತಾ ರಮೇಶ, ಉಪನ್ಯಾಸಕ ಸುಶಾಂತ್ ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here