ಕುಂದಾಪುರ :ವಿದ್ಯಾರ್ಥಿಗಳೇ ದೇಶದ ಶಕ್ತಿ: ಡಾ| ಎಸ್. ಭಾಸ್ಕರ್ ಶೆಟ್ಟಿ

0
296

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ವಿದ್ಯಾರ್ಥಿಗಳೇ ದೇಶದ ಆಸ್ತಿ. ಯುವ ಸಮುದಾಯವು ಕಲಿಕೆಯ ಜೊತೆಗೆ ಬದುಕಿನ ಕೌಶಲ್ಯಗಳನ್ನು ಬೆಳೆಸಿಕೊಂಡು ಸತ್ಪ್ರಜೆಗಳಾಗಬೇಕು. ವಿದ್ಯಾರ್ಥಿಗಳು ದೇಶದ ಶಕ್ತಿ ಇದ್ದಂತೆ, ಆ ನಿಟ್ಟಿನಲ್ಲಿ ದೇಶ ಕಟ್ಟುವ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ಉಡುಪಿ ಇದರ ಪ್ರಾಂಶುಪಾಲರಾದ ಡಾ| ಎಸ್. ಭಾಸ್ಕರ್ ಶೆಟ್ಟಿಯವರು ಹೇಳಿದರು.

ಅವರು ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2022-23ನೇ ಸಾಲಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯನ್ನು ಉದ್ಘಾಟಿಸಿ ಮಾತನಾಡಿದರು.

Click Here

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ .ಉಮೇಶ ಶೆಟ್ಟಿ ಕಾರ್ಯಕ್ರಮದ‌ ಅಧ್ಯಕ್ಷತೆ‌ ವಹಿಸಿದ್ದರು.

ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೊವಾಡಿ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಆಧಿಕಾರಿ ವಿನಿತಾ.ಎಸ್. ಗಾಣಿಗ ಉದ್ಘಾಟಕರನ್ನು ಸಭೆಗೆ ಪರಿಚಯಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ವಂದಿಸಿದರು.

ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ ವಿಘ್ನೇಶ್ ಶೆಟ್ಟಿ ಸಮಿತಿಯ ಸದಸ್ಯರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಎಸ್.ಕ್ಯೂ.ಎ.ಸಿ ಪ್ರತಿನಿಧಿ ಪೂರ್ಣಿಮಾ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ 2022-23ನೇ ಸಾಲಿನ ಯೋಜಿತ ಕಾರ್ಯ ಚಟುವಟಿಕೆಗಳ ಕುರಿತು ತಿಳಿಸಿದರು. ಇಂಗ್ಲೀಷ್ ಉಪನ್ಯಾಸಕಿ ಮೋನಿಕಾ ಡಿ.ಸೋಜಾ ಕಾರ್ಯಕ್ರಮ ನಿರೂಪಿಸಿದರು.

Click Here

LEAVE A REPLY

Please enter your comment!
Please enter your name here