ಕುಂದಾಪುರ ಮಿರರ್ ಸುದ್ದಿ…
ಕೋಟ: ಫಾರ್ಚೂನ್ ಅಕಾಡೆಮಿ & ಚಾರಿಟೇಬಲ್ ಟ್ರಸ್ಟ್ ಇದರ ಬಿ.ಡಿ. ಶೆಟ್ಟಿ ಕಾಲೇಜ್ ಆಫ್ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಮಾಬುಕಳದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಸ.ಪ್ರ.ದ. ಕಾಲೇಜು ತೆಂಕನಿಡಿಯೂರು ಇಲ್ಲಿನ ಉಪನ್ಯಾಸಕ ಪ್ರಶಾಂತ್ ನೀಲಾವರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಇಂದಿನ ಅನೇಕ ಜನನಾಯಕರು ಹಿಂದೆ ತಮ್ಮ ವಿದ್ಯಾರ್ಥಿ ಜೀವನದಲ್ಲಿ ನಾಯಕರಾಗಿದ್ದವರು. ವಿದ್ಯಾರ್ಥಿ ನಾಯಕರಾದವರು ಮುಕ್ತ ಮನಸ್ಸನ್ನು, ಸ್ವತಂತ್ರ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು, ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ವತಿಯಿಂದ ಅನೇಕ ಕಾರ್ಯಕ್ರಮಗಳು ನಡೆಯಬೇಕು ಎಂದು ವಿದ್ಯಾರ್ಥಿಗಳಿಗೆ ಹುರಿದುಂಬಿಸಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಗಣೇಶ್ ಜಿ, ಮಾಬುಕಳ ಬಿ.ಡಿ. ಶೆಟ್ಟಿ ನಿವೃತ್ತ ಪ್ರಾಂಶುಪಾಲ ಕಾಲೇಜ್ ಮೇಜರ್ ಜಿ ಬಾಲಕೃಷ್ಣ ಶೆಟ್ಟಿ , ಚೇತನ ಪ್ರೌಢಶಾಲೆ ಹಂಗಾರಕಟ್ಟೆ ಮುಖ್ಯ ಶಿಕ್ಷಕಿ ಕಲ್ಪನಾ, , ಕಾಲೇಜಿನ ಪ್ರಾಂಶುಪಾಲೆ ಸ್ಮಿತಾ ಮೋಲ್ ಇ.ಎಂ., ಹಾಗೂ ಕಾರ್ಯದರ್ಶಿ ಮಹೇಶ್ ಆಚಾರ್ ಉಪಸ್ಥಿತರಿದ್ದರು.
ಫಾರ್ಚುನ್ ಅಕಾಡೆಮಿ ಮತ್ತು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ತಾರನಾಥ್ ಶೆಟ್ಟಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಉಪನ್ಯಾಸಕಿ ವನಿತಾ ನಿರೂಪಿಸಿದರು, ಹೆರಿಕ್ ಡಿಸಿಲ್ವಾ ಪ್ರಾಸ್ತಾವಿಕ ಮಾತುಗಳನ್ನಾಡಿದರು, ವಾಣಿಜ್ಯ ವಿಭಾಗದ ಮುಖ್ಯಸ್ಥ ಸುಕುಮಾರ್ ಶೆಟ್ಟಿಗಾರ್ ಪ್ರತಿಜ್ಞಾ ವಿಧಿಯನ್ನು ನೆರವೇರಿಸಿದರು. ಉಪನ್ಯಾಸಕಿ ರತ್ನ ಅತಿಥಿಗಳ ಪರಿಚಯವನ್ನು ಮಾಡಿದರು. ಉಪನ್ಯಾಸಕಿ ದಿಶಾ ಸ್ವಾಗತಿಸಿ, ವಿದ್ಯಾರ್ಥಿ ನಾಯಕ ಧನುಷ್ ವಂದಿಸಿದರು.











