ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ – ಡಾ| ಬಿ. ಬಿ. ಹೆಗ್ಡೆಯವರ ಸಂಸ್ಮರಣ ಕಾರ್ಯಕ್ರಮ

0
273

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕುಂದಾಪುರದಲ್ಲಿ ವೈದ್ಯಕೀಯ, ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಮಹತ್ತರ ಸಾಧನೆಗೈದ ಪ್ರಮುಖರಲ್ಲಿ ಡಾ| ಬಿ.ಬಿ. ಹೆಗ್ಡೆ ಅವರು ಅಗ್ರಪಂತಿಯಲ್ಲಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಮಾಡುವುದರ ಜೊತೆಗೆ ನೂರಾರು ಜನರಿಗೆ ಬದುಕನ್ನ ಕಟ್ಟಿಕೊಳ್ಳಲು ಡಾ| ಬಿ.ಬಿ. ಹೆಗ್ಡೆಯವರ ಹೆಸರಿನಲ್ಲಿ ಸ್ಥಾಪಿಸಲ್ಪಟ್ಟ ಈ ಸಂಸ್ಥೆಯಲ್ಲಿ ಡಾ| ಬಿ. ಬಿ. ಹೆಗ್ಡೆಯವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ ಶೆಟ್ಟಿ ಹೇಳಿದರು.

Click Here

ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ ಡಾ| ಬಿ. ಬಿ. ಹೆಗ್ಡೆ ಅವರ ಸಂಸ್ಮರಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದ ಸಂಯೋಜಕರಾದ ರೇಷ್ಮಾ ಶೆಟ್ಟಿ ಅವರು ಪ್ರಾಸ್ತಾವಿಸಿ, ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ಪ್ರವೀಣಾ ಎಮ್. ಪೂಜಾರಿ ಕಾರ್ಯಕ್ರಮವನ್ನು ನಿರೂಪಿಸಿದರು.

Click Here

LEAVE A REPLY

Please enter your comment!
Please enter your name here