ಗ್ರಾಮಸ್ಥರ ಬಹುಕಾಲದ ಕನಸು ನನಸು – ಸೌಡ-ಶಂಕರನಾರಾಯಣ ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ
ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಬೈಂದೂರು ವಿಧಾನ ಸಭಾ ಕ್ಷೇತ್ರದ 40 ಸಾವಿರ ಕುಟುಂಬಗಳಿಗೆ ಕುಡಿಯುವ ನೀರು ಪೂರೈಸುವ ವಾರಾಹಿ ನದಿಯು ಗಂಗೆಯಷ್ಟೇ ಪವಿತ್ರ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದ್ದಾರೆ.
ಅವರು ಶನಿವಾರ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರೂ.1542.00ಲಕ್ಷ ವೆಚ್ಚದಲ್ಲಿ ವಾರಾಹಿ ನದಿಗೆ ಅಡ್ಡಲಾಗಿ ಶಂಕರನಾರಾಯಣ ಗ್ರಾಮದ ಸೌಡದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ವಾರಾಹಿ ನದಿಯನ್ನು ತಡೆಗಟ್ಟಿ ಅಭಿವೃದ್ದಿ ಮಾಡಬೇಕಾದರೆ ಆಂಜನೇಯನ ಅನುಗ್ರಹ ಬೇಕು ಎಂದು ಹೇಳಿದ ಅವರು, ಶಂಕರನಾರಾಯಣ ಅಭಿವೃದ್ಧಿಗೆ ಪ್ರತಾಪಚಂದ್ರ ಶೆಟ್ಟಿಯವರು ಬಹಳಷ್ಟು ಪ್ರಯತ್ನಿಸಿದ್ದಾರೆ ಎಂದು ನೆನಪಿಸಿಕೊಂಡರು. ಶಂಕರನಾರಾಯಣಕ್ಕೆ 40 ಕೋಟಿ ಅನುದಾನ ಬಿಡುಗಡೆ ಮಾಡುವ ಮೂಲಕ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಶಂಕರನಾರಾಯಣಕ್ಕೆ ಅತೀ ಹೆಚ್ಚು ಅನುದಾನ ನೀಡಿದಂತಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಸುಕುಮಾರ್ ಶೆಟ್ಟಿ ಅವರಿಗೆ ಸನ್ಮಾನಿಸಿ, ಗೌರವಿಸಲಾಯಿತು.
ಈ ಸಂದರ್ಭ ಬೈಂದೂರು ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಶಂಕರನಾರಾಯಣ ಗ್ರಾಮ ಪಂಚಾಯತ್ ಅಧ್ಯಕ್ಷೆ ಲತಾ ಡಿ.ಎಸ್, ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಜಗನ್ನಾಥ್, ಕಾಂಗ್ರೆಸ್ ಮುಖಂಡ ಹರಿಪ್ರಸಾದ್ ಶೆಟ್ಟಿ, ಪಟ್ಟಾಭಿರಾಮ ದೇವಸ್ಥಾನದ ಮೊಕ್ತೇಸರ, ಇಂಜಿನಿಯರ್ ದುರ್ಗಾದಾಸ್, ಶಂಕರನಾರಾಯಣ ದೇವಸ್ಥಾನದ ಮೊಕ್ತೇಸರ, ಜಿಲ್ಲಾ ಪಂಚಾಯತ್ ಸದಸ್ಯ ರೋಹಿತ್ ಶೆಟ್ಟಿ, ಗುತ್ತಿಗೆದಾರರು ರವಿಕಿರಣ್ ಡಿ’ ಕೋಸ್ತ್ , ರೋವನ್ ಡಿ’ ಕೋಸ್ತ್, ಶರತ್ ಶೆಟ್ಟಿ ಉಪ್ಪುಂದ, ಚಿಟ್ಟೆ ರಾಜಗೋಪಾಲ್ ಮೊದಲಾದವರು ಉಪಸ್ಥಿತರಿದ್ದರು. ರವಿ ಕುಲಾಲ್ ಪ್ರಾಸ್ತಾವಿಸಿದರು, ಉಮೇಶ್ ಶೆಟ್ಟಿ ಕಲ್ಗದ್ದೆ ಸ್ವಾಗತಿಸಿ ವಂದಿಸಿದರು.











