ಕುಂದಾಪುರ ಮಿರರ್ ಸುದ್ದಿ…
ಕೋಟ: ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ ನೇತ್ರತ್ವದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಣೂರು ಗೆ ಭೇಟಿ ನೀಡಿ ಮಧ್ಯಾಹ್ನ ಬಿಸಿಯೂಟ ತಯಾರಿಸಿರುವುದನ್ನು ಸ್ವತಃ ಊಟವನ್ನು ಮಾಡುವುದರೊಂದಿಗೆ ಗುಣಮಟ್ಟವನ್ನು ಪರಿಶೀಲಿಸಿದರು. ಶಾಲೆಗೆ ಬೇಕಾಗಿರುವ ಇಂಗುಗುಂಡಿ ಹಾಗೂ ದಾಸ್ತಾನು ಕೊಠಡಿ ಬೇಡಿಕೆ ಇರುವುದನ್ನು ಶಾಲಾ ಮುಖ್ಯೋಪಾಧ್ಯಾಯರೊಂದಿಗೆ ಚರ್ಚಿಸಿ ಎನ್‍ಆರ್‍ಇಜಿಎ ಕ್ರಿಯಾಯೋಜನೆಯಲ್ಲಿ ಅಳವಡಿಸಿ ಮಾಡಿಕೊಡಲಾಗುವುದೆಂದು ತಿಳಿಸಲಾಯಿತು. ಉಪಾಧ್ಯಕ್ಷೆ ಜಯಂತಿ ಪೂಜಾರಿ,ಅಭಿವೃದ್ಧಿ ಅಧಿಕಾರಿ ಸುರೇಶ್ ಬಂಗೇರ, ಸ್ಥಳೀಯ ಪಂಚಾಯತ್ ಸದಸ್ಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತಿತರರು ಉಪಸ್ಥಿತರಿದ್ದರು.











