ಕುಂದಾಪುರ ಮಿರರ್ ಸುದ್ದಿ…
ಕೋಟ: ಕೋಟದ ಲಕ್ಷ್ಮೀ ಸೋಮಬಂಗೇರ ಸರಕಾರಿ ಪ್ರಥಮದರ್ಜೆಕಾಲೇಜು ಇಲ್ಲಿ ಸ್ನಾತಕೋತ್ತರ ಪದವಿ ಶಿಕ್ಷಣದ ಬಗ್ಗೆ ಮಾಹಿತಿ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಅಜಿಂ ಪ್ರೇಮ್‍ಜಿ ವಿಶ್ವವಿದ್ಯಾನಿಲಯದ ಜೇಕಬ್ ಜಾರ್ಜ್ ಅವರು ವಿದ್ಯಾರ್ಥಿಗಳಿಗೆ ಪದವಿ ನಂತರದಲ್ಲಿ ತಮ್ಮ ಸಂಸ್ಥೆಯಲ್ಲಿ ಲಭ್ಯವಿರುವ ಪದವಿ ಕೋರ್ಸ್‍ಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಸುನೀತ ವಿ ಅವರು ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಉದ್ಯೋಗ ಮಾಹಿತಿ ಕೋಶದ ಸಂಚಾಲಕ ಡಾ. ಸುಬ್ರಮಣ್ಯ ಉಪಸ್ಥಿತರಿದ್ದರು. ಡಾ. ಲೀಲಾವತಿ. ಎನ್, ಸಹಾಯಕ ಪ್ರಾಧ್ಯಾಪಕರು, ವಾಣಿಜ್ಯಶಾಸ್ತ್ರ ವಿಭಾಗ ಇವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಮನೋಹರ್.ಬಿ ಸಹಾಯಕ ಪ್ರಾಧ್ಯಾಪಕರು, ವಾಣಿಜ್ಯಶಾಸ್ತ್ರ ವಿಭಾಗ ವಂದಿಸಿದರು.











