ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಉಡುಪಿ ಜಿಲ್ಲಾ ಯೂನಿಯನ್ ಹಾಗೂ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ.ಉಪ್ಪುಂದ ಇದರ ಸಂಯುಕ್ತಾಶ್ರದಲ್ಲಿ 69ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಸಮಾರೋಪ ಹಾಗೂ ಪ್ರತಿಭಾ ಪುರಸ್ಕಾರ, ಸಮ್ಮಾನ, ಗೌರವ ಧನ ವಿತರಣಾ ಸಮಾರಂಭ ಖಂಬದಕೋಣೆ ಕರ್ನಾಟಕ ಖಾರ್ವಿ ಯಾನೆ ಹರಿಕಾಂತ ಮಹಾಜನ ಸಭಾಂಗಣದಲ್ಲಿ ನ.20ರಂದು ನಡೆಯಿತು.

ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿ, ಜನರ ವಿಶ್ವಾಸ ಗಳಿಸಿದಾಗ ಸಹಕಾರಿ ಸಂಘಗಳು ಯಶಸ್ವಿಯಾಗಿ ಮುನ್ನೆಡಯುತ್ತದೆ. ಖಂಬದಕೋಣೆ ರೈತರ ಸಹಕಾರಿ ಸಂಘವು ತನ್ನ ಲಾಭಾಂಶದಲ್ಲಿ ವಿದ್ಯಾರ್ಥಿಗಳಿಗೆ, ಸರಕಾರಿ ಶಾಲೆಗಳಿಗೆ ಸಹಕಾರ ನೀಡುತ್ತಿರುವುದು ಶ್ಲಾಘನಿಯವಾದ ಕಾರ್ಯವಾಗಿದೆ ಎಂದರು.
ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಹಕಾರಿಗಳು ದಕ್ಷತೆ ಹಾಗೂ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವುದರಿಂದ ಜನರ ವಿಶ್ವಾಸ ಗಳಿದೆ. ಆದರಿಂದ ದೇಶದಲ್ಲಿ ಸಹಕಾರಿ ಸಂಸ್ಥೆಗಳು ಬಲಿಷ್ಠವಾಗಿದೆ ಎಂದರು.
ಸಹಕಾರಿ ರತ್ನ ಪ್ರಶಸ್ತಿ ವಿಜೇತ ಜಯಕರ ಶೆಟ್ಟಿ ಇದ್ರಾಳಿ ಅವರನ್ನು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ವತಿಯಿಂದ ಸಮ್ಮಾನಿಸಲಾಯಿತು.
23 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೌರವ ಶಿಕ್ಷಕರಿಗೆ ರೂ.4.60ಸಾವಿರ ಗೌರವಧನ ಸಹಾಯ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹಸ್ತಾಂತರಿಸಿದರು. ಜಿಲ್ಲಾ ಯೂನಿಯನ್‍ಗೆ ರೂ.7.23ಸಾವಿರ ಸಂಘಟನೆಗಾಗಿ ನೀಡಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ಸ್ವ-ಸಹಾಯ ಸಂಘಗಳಿಗೆ ವಿವಿಧ ಸವಲತ್ತುಗಳನ್ನು ನೀಡಲಾಯಿತು.
ಈ ಸಂದರ್ಭ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ನಿರ್ದೇಶಕ ಎಸ್.ರಾಜು ಪೂಜಾರಿ, ಎಂ.ಮಹೇಶ ಹೆಗ್ಡೆ, ಕಂಬದಕೋಣೆ ಗ್ರಾ.ಪಂ.ಅಧ್ಯಕ್ಷ ಸುಕೇಶ ಶೆಟ್ಟಿ,, ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಲಾವಣ್ಯ ಕೆ.ಆರ್, ಸಂಘದ ಉಪಾಧ್ಯಕ್ಷ ಈಶ್ವರ ಹಕ್ಲತೋಡು, ನಿರ್ದೇಶಕರಾದ ಬಿ.ಎಸ್.ಸುರೇಶ ಶೆಟ್ಟಿ, ಮೋಹನ ಪೂಜಾರಿ, ಮಂಜು ದೇವಾಡಿಗ, ನಾಗರಾಜ ಖಾರ್ವಿ, ಗುರುರಾಜ್ ಹೆಬ್ಬಾರ್, ದಿನಿತಾ ಶೆಟ್ಟಿ, ವನಜಾ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಷ್ಣು ಆರ್.ಪೈ ಸ್ವಾಗತಿಸಿದರು. ಹಿರಿಯ ವ್ಯವಸ್ಥಾಪಕ ಚಂದ್ರಯ್ಯ ಶೆಟ್ಟಿ ವಂದಿಸಿದರು. ಶಿಕ್ಷಕ ಸುಬ್ರಹ್ಮಣ್ಯ ಉಪ್ಪುಂದ ನಿರೂಪಿಸಿದರು.











