ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಅಶೋಕ ಪೂಜಾರಿ ಬೀಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಶೋಕ್ ಪೂಜಾರಿಯವರು ಈ ಹಿಂದೆಯೂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಇದೀಗ ಎರಡನೇ ಬಾರಿಗೆ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದಾರೆ. ಕುಂದಾಪುರ ತಾಲೂಕು ಬಿಲ್ಲವ ಸೇವಾ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಇವರು, ಕುಂದಾಪುರ ತಾಲೂಕು ಪಂಚಾಯತಿನ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷರಾಗಿ, ಬೀಜಾಡಿ ಮೀನುಗಾರರ ಸಹಕಾರಿ ಸಂಘದ ನಿರ್ದೇಶಕರಾಗಿ, ಬೀಜಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕೋಟೇಶ್ವರ ವ್ಯವಸಾಯ ಸೆವಾ ಸಹಕಾರಿ ಸಂಘದ ನಿದೇಶಕರಾಗಿ ಕಳೆದ 19 ವರ್ಷಗಳಿಂದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಬಳಿಕ ನಡೆದ ಅಭಿನಂದನಾ ಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಂ.ಮಹೇಶ ಹೆಗ್ಡೆ, ಟಿ.ಎ.ಪಿ.ಸಿ ಎಂ.ಎಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಕುಂದಾಪುರ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಹಿರಿಯ ಸದಸ್ಯರಾದ ಶೇಷಗಿರಿ ಗೋಟ ಮುಂತಾದವರು ಉಪಸ್ಥಿತರಿದ್ದರು.
ನೂತನ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷ ಶರತ್ ಕುಮಾರ್ ಹೆಗ್ಡೆ ಸ್ವಾಗತಿಸಿದರು. ಸಂಘದ ನಿರ್ದೇಶಕರುಗಳಾದ ಭರತ್ ಕುಮಾರ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಗೋಪಾಲ ಶೆಟ್ಟಿ, ಎಂ.ಮೋಹನದಾಸ ಶೆಟ್ಟಿ, ನರಸಿಂಹ ಪೂಜಾರಿ, ನವೀನ್ ಕುಮಾರ್ ಹೆಗ್ಡೆ, ಸುರೇಶ ಕೆ.ವಿ., ಆಶಾಲತಾ ಶೆಟ್ಟಿ, ಸುಧಾ, ಚಿಕ್ಕು, ಹಾಗು ವೃತ್ತಿಪರ ನಿರ್ದೇಶಕ ಗೋಪಾಲ ಪೂಜಾರಿ, ವಲಯ ಮೇಲ್ವಿಚಾರಕ ಸಂದೀಪ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.











