ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯರಾಗಿ ಸಾಮ್ರಾಟ್ ಶೆಟ್ಟಿ ಹಳ್ನಾಡ್ ಆಯ್ಕೆಯಾಗಿದ್ದಾರೆ.
ಕಳೆದ ಆಗಸ್ಟ್ 20ರಂದು ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ತನ್ನು ಕಂದಾಯ ಇಲಾಖೆಯ ಧಾರ್ಮಿಕ ದತ್ತಿ ಇಲಾಖೆಯ ಅಧೀನ ಕಾರ್ಯದರ್ಶಿಗಳು ರಚಿಸಿದ್ದರು. ಅದರಲ್ಲಿ ಪ್ರಣಯಕುಮಾರ್ ಶೆಟ್ಟಿ ಆಯ್ಕೆಯಾಗಿದ್ದರು. ಬಳಿಕ ಪ್ರಣಯಕುಮಾರ್ ರಾಜೀನಾಮೆ ನೀಡಿದ್ದರಿಂದ ಅವರ ಸ್ಥಾನ ತೆರವಾಗಿತ್ತು. ಇದೀಗ ಅದೇ ಸ್ಥಾನಕ್ಕೆ ಕುಂದಾಪುರ ತಾಲೂಕಿನ ಹಳ್ನಾಡಿನ ದಿವಂಗತ ಕೆ. ಮಹಾಬಲ ಶೆಟ್ಟಿಯವರ ಪುತ್ರ ಬಿಜೆಪಿಯ ಸಕ್ರಿಯ ಕಾರ್ಯಕರ್ತ ಸಾಮ್ರಾಟ್ ಶೆಟ್ಟಿಯವರನ್ನು ನೇಮಿಸಿ ಆದೇಶ ಹೊರಡಸಲಾಗಿದೆ.











