ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ನಮ್ಮ ಮಾತೃಭಾಷೆಯ ಬಗ್ಗೆ ಅಭಿಮಾನವಿರಲಿ. ಜೊತೆಗೆ ಅನ್ಯ ಭಾಷೆಗಳ ಬಗ್ಗೆ ತಿಳಿದರಲಿ. ಆಗ ಮಾತ್ರ ನಾವು ನಮ್ಮ ವ್ಯಾಪ್ತಿಯನ್ನು ಮೀರಿ ಬದುಕುವುದಕ್ಕೆ ಸಾಧ್ಯವೆಂದು ಮಂಗಳೂರು ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದರು.
Video:-

ಅವರು ಕುಂದಾಪುರದ ಓಕ್ ವುಡ್ ಇಂಡಿಯನ್ ಸ್ಕೂಲಿನ ವಾರ್ಷಿಕೋತ್ಸವ ಮತ್ತು ಕ್ಯಾಂಪಸ್ ಅನಾವರಣ ಕಾರ್ಯಕ್ರಮದಲ್ಲಿ ದಲ್ಲಿ ಭಾಗವಹಿಸಿ ಮಾತನಾಡಿದರು. ಬಾಲ್ಯದಲ್ಲಿಯೇ ಮಕ್ಕಳ ವ್ಯಕ್ತಿತ್ವ ವಿಕಸನ ಮಾಡುವ ಜವಾಬ್ಧಾರಿ ಹಿರಿಯರದ್ದು ಎಂದ ಅವರು ಶಿಕ್ಷಣದ ಜೊತೆಗೆ ಭವಿಷ್ಯದ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಬೇಕಾದರೆ ಬಾಲ್ಯದಲ್ಲಿಯೇ ಸ್ವಚ್ಚ ರಾಜಕೀಯದ ಜ್ಣಾನ ಬೆಳೆಸಿಕೊಳ್ಳಬೇಕು. ವೈದ್ಯರಾಗಲೀ, ಇಂಜಿನಿಯರ್ ಆಗಲಿ, ದೇಶದ ರಾಜಕೀಯ ವರ್ತಮಾನಗಳನ್ನು ಅರಿಯುವ ಶಕ್ತಿಯಿದ್ದರೆ, ಭವಿಷ್ಯದ ಬಗ್ಗೆ ಚಿಂತನೆ ಮೂಡುತ್ತದೆ. ತನ್ನದು ಎನ್ನುವುದರ ಜೊತೆಗೆ ದೇಶಭಿಮಾನ ಮೂಡಿಸಿಕೊಂಡರೆ ಮಾತ್ರ ಉತ್ತಮ ವ್ಯಕ್ತಿಯಾಗುತ್ತಾರೆ ಎಂದರು.
ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮಾತನಾಡಿ, ಆಂಗ್ಲ ಭಾಷಾ ವ್ಯಾಮೋಹದಲ್ಲಿ ಕನ್ನಡ ಶಾಲೆಯ ವಿದ್ಯಾರ್ಥಿಗಳ ಸ್ಟೇಟಸ್ ಕಡಿಮೆಯಾಗದಂತೆ ಎಚ್ಚರಿಕೆ ವಹಿಸಬೇಕಾಗಿದೆ. ಮಕ್ಕಳನ್ನು ಮನುಷ್ಯರನ್ನಾಗಿ ರೂಪಿಸುವುದೇ ನಿಜವಾದ ಶಿಕ್ಷಣ ಎಂದರು.
ಶಾಲೆಯ ಮುಖ್ಯಸ್ಥೆ ನೀತಾ ಶೆಟ್ಟಿ ವರದಿ ವಾಚಿಸಿ, ಸ್ವಾಗತಿಸಿದರು. ಸಂಸ್ಥೆಯ ಸ್ಥಾಪಕಾಧ್ಯಕ್ಷ ಡಾ. ಕೆ.ಭುಜಂಗ ಶೆಟ್ಟಿ, ಬ್ರಹ್ಮಾವರ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್ ನ ನಿರ್ದೇಶಕ ಮ್ಯಾಥ್ಯೂ ಸಿ.ನಿನನ್, ಅಭಿನಂದನಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.











