ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಡಿ.2 ರಂದು ಮಾಹಿತಿ ಕಾರ್ಯಾಗಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ತ್ರಿಶಾ ಕಾಲೇಜಿನ ಸಂಸ್ಥಾಪಕರಾದ ಸಿ.ಎ. ಗೋಪಾಲಕೃಷ್ಣ ಭಟ್ ಅವರು ಜೀವನದ ಪ್ರಮುಖ ಘಟ್ಟವಾಗಿರುವ ಪಿಯುಸಿಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವಾಗ ಉಂಟಾಗುವ ಗೊಂದಲ, ಆತಂಕಗಳನ್ನು ದೂರ ಮಾಡಿ ಹೇಗೆ ಆತ್ಮ ವಿಶ್ವಾಸ ರೂಪಿಸಿಕೊಳ್ಳಬೇಕು ಮತ್ತು ಉತ್ತಮ ಭವಿಷ್ಯದ ಕನಸು ಕಟ್ಟಿಕೊಂಡಿರುವ ವಿದ್ಯಾರ್ಥಿಗಳು ಪಿಯುಸಿ ನಂತರ ಮುಂದೇನು ಎನ್ನುವ ಗೊಂದಲಕ್ಕೆ, ಯಾವ ಕೋರ್ಸ್ ಆಯ್ಕೆ ಮಾಡಿಕೊಂಡರೇ ಜೀವನದಲ್ಲಿ ಯಶಸ್ವಿ ಯಾಗಬಹುದು ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಕಾಲೇಜಿನ ಪ್ರಾಂಶುಪಾಲೆ ರಾಗಿಣಿ ಅವರು ವಹಿಸಿದ್ದರು.
ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಸುಶಾಂತ್ ನಾಯಕ್ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಇಂಗ್ಲೀಷ್ ಉಪನ್ಯಾಸಕಿ ಸುಪ್ರೀತಾ ಶೆಟ್ಟಿ ಸ್ವಾಗತಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಸವಿತಾ ರಮೇಶ್ ವಂದಿಸಿದರು, ಅರ್ಥಶಾಸ್ತ್ರ ಉಪನ್ಯಾಸಕ ಮಂಜುನಾಥ್ ಕಾರ್ಯಕ್ರಮ ನಿರ್ವಹಿಸಿದರು.











