ಕುಂದಾಪುರ :ಸುಣ್ಣಾರಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ

0
365

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ವಾಲಿಬಾಲ್ ಪಂದ್ಯಾಟದಂತೆ ಮನುಷ್ಯನ ಜೀವನ. ಹೊಡೆತಗಳಿಗೆ ಕುಗ್ಗದೆ, ಮೇಲೇರುವಿಕೆ ಜೀವನದ ಯಶಸ್ಸನ್ನು ಸೂಚಿಸುತ್ತದೆ. ಜೀವನದಲ್ಲಿ ಹೊಡೆತಗಳಿಗೆ ಕುಗ್ಗದೆ ಮೇಲೇರಬೇಕು ಎಂದು ಉಡುಪಿಯ ಪೇಜಾವರ ಮಠದ ಯತಿಗಳಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು.

ಅವರು ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ, ಸುಣ್ಣಾರಿ ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಹಾಗೂ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಡಿ.8 ರಿಂದ 10 ರವರೆಗೆ ನಡೆಯಲಿರುವ ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ಆಟದ ಜೊತೆಗೆ ಪಾಠವು ಇದೆ. ನಮ್ಮನ್ನು ಎತ್ತರಿಸುವ ಏರಿಸುವ ಪ್ರಯತ್ನ ನಮ್ಮಲ್ಲಿ ಬೆಳೆಯಬೇಕು. ಸವಾಲುಗಳನ್ನು ಸ್ವೀಕರಿಸಿ ಮುನ್ನೆಡೆಯಬೇಕು. ಆಗಲೇ ಯಶಸ್ಸು ಸಾಧ್ಯ ಎಂದರು.

Click Here

ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು, ವಿದೇಶದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಇರುವ ಪ್ರೋತ್ಸಾಹ ಹಾಗೂ ಅನುದಾನ ನಮ್ಮ ದೇಶದಲ್ಲಿ ಇಲ್ಲ ಎನ್ನುವುದು ನೋವಿನ ಸಂಗತಿ. ರಾಜ್ಯದಲ್ಲಿ ಕ್ರೀಡಾ ನೀತಿಯನ್ನು ಜಾರಿಗೆ ತರಲಾಗಿದೆ‌. ಕ್ರೀಡಾ ಕ್ಷೇತ್ರದಲ್ಲಿ‌ ಇರುವ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ಕೊಡುವ ನಿರ್ಧಾರಗಳಾಗಬೇಕು. ಉದ್ಯೋಗದಲ್ಲಿ ಕ್ರೀಡಾ ಸಾಧಕರಿಗೆ ಅವಕಾಶ ದೊರಕುತ್ತಿರುವುದು ಸ್ವಾಗತಾರ್ಹ. ಕ್ರೀಡಾಳುಗಳನ್ನು ಗೌರವಯುತವಾಗಿ ನಡೆಸಿಕೊಳ್ಳುವ ಸತ್ ಸಂಪ್ರದಾಯಗಳು ಬರಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೆ ಗೌಡ ಅವರು ಪಥ ಸಂಚಲನದ ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿ, ಸರಕಾರದಿಂದ ಕ್ರೀಡೆಗೆ ನಿರೀಕ್ಷಿತ ಉತ್ತೇಜನ ಸಿಗುತ್ತಿಲ್ಲ. ಗ್ರಾಮೀಣ ಪ್ರದೇಶದ ಕ್ರೀಟಾಪಟುಗಳನ್ನು ಪ್ರೋತರಸಾಹಿಸುವಲ್ಲಿ ವಿಫಲವಾಗಿದ್ದೇವೆ. ಇಂತಹ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಸರಕಾರ ನೀಡುವುದು 39 ಸಾವಿರ ಅಷ್ಟೆ. 3೦ ಲಕ್ಷ ಹಣ ವಿನೊಯೋಗಿ ಪಂಧ್ಯಾಟ ನಡೆಸಲು ಇಂಥಹ ಶಿಕ್ಷಣ ಸಂಸ್ಥೆಗಳು ಸಾರ್ವಜನುಜನಿಕರ ಸಹಕಾರದಿಂದಷ್ಟೇ ಸಾಧ್ಯ.ಎಂದರು
ಉದ್ಯಮಿ ಮಹೇಶ್ ಹೆಗ್ಡೆ ಮೊಳಹಳ್ಳಿ ಧ್ವಜಾರೋಹಣ ನೆರವೇರಿಸಿದರು. ರಾಜ್ಯ ಮಟ್ಟದ ವಾಲಿಬಾಲ್ ಆಟಗಾರ ಅನುಜ್ ಕುಮಾರ್ ಪ್ರತಿಜ್ಞಾವಿಧಿ ಭೋದಿಸಿದರು. ಕ್ರೀಡಾ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ರಾಷ್ಟ್ರೀಯ ವಾಲಿಬಾಲ್ ಆಟಗಾರ ರೈಸನ್ ಬೆನೆಟ್ ರೆಬೆಲ್ಲೋ ಅವರನ್ನು ಸನ್ಮಾನಿಸಲಾಯಿತು‌.

ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಸ್ರೂರು ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್ ಕಾರ್ಯದರ್ಶಿ ಪ್ರಕಾಶ್ಚಂದ್ರ ಶೆಟ್ಟಿ, ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಎಂ.ಎಂ ಹೆಗ್ಡೆ ಎಜುಕೇಶನ್ ಎಂಡ್ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಮಹೇಶ ಹೆಗ್ಡೆ ಮೊಳಹಳ್ಳಿ, ಉದ್ಯಮಿ ದಿನೇಶ್ ಹೆಗ್ಡೆ ಮೊಳಹಳ್ಳಿ, ರಾಷ್ಟ್ರೀಯ ವಾಲಿಬಾಲ್ ಆಟಗಾರ ರೈಸನ್ ಬೆನೆಟ್ ರೆಬೆಲ್ಲೋ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ, ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್.ಮಂಜಯ್ಯ ಶೆಟ್ಟಿ ಸಬ್ಲಾಡಿ, ಹೊಂಬಾಡಿ-ಮಂಡಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್ ಮಡಿವಾಳ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಜೀವನ್ ಶೆಟ್ಟಿ ಹರ್ಕೂರು, ಪಂದ್ಯಾಟದ ವೀಕ್ಷಕ ಮಹಾಂತೇಶ, ಕ್ರೀಡಾ ನಿರ್ದೇಶಕ ದಿನೇಶ್ ಶೆಟ್ಟಿ, ಉದ್ಯಮಿಗಳಾದ ಜಯಶೀಲ ಶೆಟ್ಟಿ ಘಟಪ್ರಭ, ಉದಯ್ ಕುಮಾರ್ ಶೆಟ್ಟಿ ಬೈಲೂರು ಉಪಸ್ಥಿತರಿದ್ದರು.

ಟ್ರಸ್ಟ್ ಕೋಶಾಧಿಕಾರಿ ಭರತ್ ಶೆಟ್ಟಿ ಸ್ವಾಗತಿಸಿದರು, ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡಾ.ರಮೇಶ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಸತೀಶ್ ಶೆಟ್ಟಿ ಪಿತ್ರೋಡಿ ನಿರೂಪಿಸಿದರು.

Click Here

LEAVE A REPLY

Please enter your comment!
Please enter your name here