ಕುಂದಾಪುರ ಮಿರರ್ ಸುದ್ದಿ…
ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಪಂಚವರ್ಣ ಮಹಿಳಾ ಮಂಡಲ ಕೋಟ ಇದರ ನೇತ್ರತ್ವದಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಾಗಾರ 6ನೇ ಮಾಲಿಕೆ ಇದೇ ಬರುವ ಡಿ.24ರ ಶನಿವಾರ ಪೂರ್ವಾಹ್ನ 10ಗ. ಸಾಸ್ತಾನದ ಹಂಗಾರಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ( ದೂಳಂಗಡಿ ಶಾಲೆ) ಇಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಣಿಪಾಲ್ ರೇಡಿಯೋ ಬಾನುಲಿ ಇದರ ಸಂಯೋಜಕಿ ರಶ್ಮಿ ಭಾಗವಹಿಸಲಿದ್ದು,ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ಯ ವಹಿಸಲಿದ್ದು,ಕಾರ್ಯಕ್ರಮವನ್ನು ಪರಿಸರ ಪ್ರೇಮಿ ರಷಿರಾಜ್ ಸಾಸ್ತಾನ ಉದ್ಘಾಟಿಸಲಿದ್ದಾರೆ. ಮುಖ್ಯ ಅಭ್ಯಾಗತರಾಗಿ ಶಾಲಾ ಮುಖ್ಯ ಶಿಕ್ಷಕಿ ಸೇಸು ಟೀಚರ್, ಐರೋಡಿ ಗ್ರಾಮಪಂಚಾಯತ್ ಅಧ್ಯಕ್ಷೆ ಗೀತಾ ಶೆಟ್ಟಿ, ಪಾಂಡೇಶ್ವರ ಗ್ರಾ.ಪಂ ಮಾಜಿ ಸದಸ್ಯೆ ಲೀಲಾವತಿ ಗಂಗಾಧರ,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್,ಪಂಚವರ್ಣದ ಗೌರವಾಧ್ಯಕ್ಷ ಸತೀಶ್ ಹೆಚ್ ಕುಂದರ್,ಸ್ಥಾಪಕಾಧ್ಯಕ್ಷ ಸುರೇಶ್ ಗಾಣಿಗ ಮತ್ತಿತರರು ಉಪಸ್ಥಿತರಿರಲಿದ್ದಾರೆ.
ಹಂದಟ್ಟು ಮಹಿಳಾ ಬಳಗ,ಮಣೂರು ಫ್ರೆಂಡ್ಸ್,ಯಕ್ಷಸೌರಭ ಕಲಾರಂಗ ಕೋಟ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಗೆಳೆಯರ ಬಳಗ ಕಾರ್ಕಡ,ಗೀತಾನಂದ ಫೌಂಡೇಶನ್ ಮಣೂರು ಸಹಕಾರ ನೀಡಲಿದೆ.











