ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬಂದ ಕ್ರೇನ್ ಡಿಕ್ಕಿಯಾದ ಪರಿಣಾಮ ಬೈಕಿನ ಹಿಂಬದಿ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ ಸವಾರ ಗಾಯಗೊಂಡ ಘಟನೆ ಸೋಮವಾರ ರಾತ್ರಿ ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ಪಾನಕದಕಟ್ಟೆ ಎಂಬಲ್ಲಿ ನಡೆದಿದೆ. ಕುಂದಾಪುರ ತಾಲೂಕಿನ ತಾಲೂಕಿನ ಹುಣಸೆಮಕ್ಕಿ ಸಮೀಪದ ಹೊಂಬಾಡಿ ನಿವಾಸಿ ಪ್ರಶಾಂತ್ ಮೊಗವೀರ (31) ಮೃತಪಟ್ಟರೆ, ಬೈಕ್ ಸವಾರ ದಿನೇಶ್ ಪೂಜಾರಿ ಗಾಯಗೊಂಡು ಆಸ್ಪತ್ರೆ ಸೇರಿದವರು ಎಂದು ತಿಳಿದು ಬಂದಿದೆ.
ದಿನೇಶ್ ಪೂಜಾರಿ ಎಂಬವರ ಬೈಕಿನಲ್ಲಿ ಪ್ರಶಾಂತ್ ಹಿಂದಿಯಲ್ಲಿ ಕುಳಿತು ಕುಂದಾಪುರ ಕಡೆಯಿಂದ ಸಿದ್ದಾಪುರ ಕಡೆಗೆ ತೆರಳುತ್ತಿದ್ದರೆನ್ನಲಾಗಿದೆ. ಇದೇ ಸಂದರ್ಭ ರಿಜೇಸ್ಟ್ರೇಷನ್ ಇಲ್ಲದ ಹೊಸ ಕ್ರೇನ್ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಬೈಕ್ ಸಮೇತ ಇಬ್ಬರು ಸವಾರರು ರಸ್ತೆಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಸವಾರ ದಿನೇಶ್ ಪೂಜಾರಿ ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಪಾಯಾದಿಂದ ಪಾರಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಳಿಕ ಕ್ರೇನ್ ಚಾಲಕ ಕ್ರೇನನ್ನು ಸ್ಥಳದಲ್ಲಿ ನಿಲ್ಲಿಸಿ ಪರಾರಿಯಾಗಿದ್ದಾನೆ.
ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











