ಕುಂದಾಪುರ ಮಿರರ್ ಸುದ್ದಿ…
ಕೋಟ: ಸಮಾಜದಲ್ಲಿ ಒಗ್ಗಟ್ಟು ಅತ್ಯವಶ್ಯಕ ಆ ಮೂಲಕ ಸಂಘಟಿತರಾಗಿ ಕಾರ್ಯನಿರ್ವಹಿಸಲು ಸಹಕಾರಿ ಎಂದು ನಾಡೋಜ ಡಾ.ಜಿಶಂಕರ್ ಹೇಳಿದರು.
ಸಾಲಿಗ್ರಾಮದ ಕರಾವಳಿ ಮೊಗವೀರ ಸಭಾಭವನದಲ್ಲಿ ಕರಾವಳಿ ಮೊಗವೀರ ಮಹಾಜನ ಸಂಘ ಕೋಟ ಇದರ ಆಶ್ರಯದಲ್ಲಿ ಕೋಟ ಸಾಲಿಗ್ರಾಮ ವ್ಯಾಪ್ತಿಯ ಮೊಗವೀರ ಗ್ರಾಮಸಭೆಗಳ ಗುರಿಕಾರರಿಗೆ ಗೌರವಧನ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ಸಮಾಜದ ಋಣ ತಿರಿಸಲು ಸಂಘಟನೆಗಳನ್ನು ವೇದಿಕೆಯಾಗಿಸಿಕೊಳ್ಳಿ ಎಂದರಲ್ಲದೆ ಸಮಾಜ ಅಭಿವೃದ್ಧಿಯಾಗಬೇಕಾದರೆ ಸಂಘಟನೆಗಳ ಪಾತ್ರ ಗಣನೀಯವಾದದ್ದು ಈ ದಿಸೆಯಲ್ಲಿ ಎಲ್ಲರೂ ಸಂಘಟಿತರಾಗಿ ಕಾರ್ಯನಿರ್ವಹಿಸಲು ಕರೆ ಇತ್ತರು.
ಕಾರ್ಯಕ್ರಮದಲ್ಲಿ ಕೋಟ ಸಾಲಿಗ್ರಾಮ ಇತರ ಭಾಗದ ಗುರಿಕಾರರಿಗೆ ಗೌರವಾರ್ಪಣೆ ಹಾಗೂ ಗೌರವಧನ ನೀಡಲಾಯಿತು.ಅತಿ ಹೆಚ್ಚು ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರಾವಳಿ ಮೊಗವೀರ ಮಹಾಜನಸಂಘ ಕೋಟ ಇದರ ಅಧ್ಯಕ್ಷ ಆನಂದ್ ಸಿ ಕುಂದರ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ದ.ಕ ಮೊಗವೀರ ಮಹಾಜನ ಸಂಘ ಉಚ್ಚಿಲ ಅಧ್ಯಕ್ಷ ಜಯ ಸಿ ಕೋಟ್ಯಾನ್, ಬಾರ್ಕೂರು ಮೊಗವೀರ ಸಂಯುಕ್ತ ಸಭಾ ಅಧ್ಯಕ್ಷ ಸತೀಶ್ ಅಮೀನ್,ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆ ಅಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡ್ಕ ,ಕಟೀಲು ದುರ್ಗಾಪರಮೇಶ್ವರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಕೃಷ್ಣ ಕಾಂಚನ್ ಕೋಡಿ,ಬ್ರಹ್ಮಾವರ ಚಾರ್ಟೆಟ್ ಅಕೌಂಟೆಂಟ್ ಪದ್ಮನಾಭ ಕಾಂಚನ್,ಮೊಗವೀಯ ಯುವ ಸಂಘಟನೆ ಸಾಲಿಗ್ರಾಮ ಘಟಕದ ಅಧ್ಯಕ್ಷ ಕಿರಣ್ ಕುಂದರ್,ಕೋಟ ಘಟಕದ ಅಧ್ಯಕ್ಷ ರಂಜಿತ್ ಕುಮಾರ್ ಉಪಸ್ಥಿತರಿದ್ದರು. ಕರಾವಳಿ ಮೊಗವೀರ ಮಹಾಜನ ಸಂಘ ಕಾರ್ಯದರ್ಶಿ ಕೃಷ್ಣಮೂರ್ತಿ ಮರಕಾಲ ಸ್ವಾಗತಿಸಿ ಪ್ರಾಸ್ತಾವನೆ ಸಲ್ಲಿಸಿದರು. ಕಾರ್ಯಕ್ರಮವನ್ನು ರಾಜು ಕರಾವಳಿ ನಿರೂಪಿಸಿದರೆ ,ಪ್ರವೀಣ್ ಕುಂದರ್ ವಂದಿಸಿದರು.ಮೊಗವೀರ ಯುವ ಸಂಘಟನೆ ಮಾಜಿ ಜಿಲ್ಲಾಧ್ಯಕ್ಷ ಶಿವರಾಮ್ ಕೆ.ಎಂ ವಂದಿಸಿದರು.











