ಕುಂದಾಪುರ ಮಿರರ್ ಸುದ್ದಿ…
ಬೈಂದೂರು :ಸಹಕಾರಿ ಸಂಸ್ಥೆಗಳು ಕೇವಲ ಸಾಲ ನೀಡುವುದು ಮತ್ತು ವಸೂಲಾತಿ ಮಾಡುವುದರ ಜೊತೆಗೆ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಾಗ ಗ್ರಾಮಗಳ ಅಭಿವೃದ್ಧಿ ಸಾಧ್ಯ ಎಂದು ವಿಧಾನಪರಿಷತ್ ಮಾಜೀ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಹೇಳಿದರು.

ಅವರು ಸೋಮವಾರ ಬೈಂದೂರು ತಾಲೂಕಿನ ಗೋಳಿಹೊಳೆ ಮೂರುಕೈ ಎಂಬಲ್ಲಿ ಶ್ರೀರಾಮ ಸೌಹಾರ್ದ ಕ್ರೆಡಿಟ ಕೊಅಪರೇಟಿವ್ ಸೊಸೈಟಿ ಬೈಂದೂರು ಇದರ ಗೋಳಿಹೊಳೆ ಶಾಖೆ ಹಾಗೂ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಸಹಯೋಗದಲ್ಲಿ ಹಮ್ಮಿಕೊಂಡ ಉಚಿತ ಆಯುರ್ವೇದ ತಪಾಸಣೆ ಮತ್ತು ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಬೈಂದೂರಿನ ಗೋಳಿಹೊಳೆ ಪ್ರದೇಶ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದೆ.
ಇದೇ ಸಂದರ್ಭದಲ್ಲಿ ಅಂತರ್ರಾಷ್ಟ್ರೀಯ ಕ್ರಿಕೆಟ್ ಪಟು, ಗೋಳಿಹೊಳೆ ಪುಷ್ಪರಾಜ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು ಮತ್ತು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು.
ಶ್ರೀರಾಮ ಕ್ರೆಡಿಟ್ ಕೊ ಅಪರೇಟಿವ್ ಸೊಸೈಟಿಯ ಅಧ್ಯಕ್ಷ, ಮಾಜೀ ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜು ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಡಾ. ನಾಗರಾಜ್ ಆರೋಗ್ಯ ಮಾಹಿತಿ ನೀಡಿದರು. ಗೋಳಿಹೊಳೆ ಪಂಚಾಯತ್ ಅಧ್ಯಕ್ಷೆ ಇಂದಿರಾ, ಶ್ರೀರಾಮ ಕ್ರೆಡಿಟ್ ಕೊ ಅಪರೇಟಿವ್ ಸೊಸೈಟಿ ಉಪಾಧ್ಯಕ್ಷ ಎಂ ವಿನಾಯಕ ರಾವ್, ಮುಖ್ಯ ಕಾರ್ಯನಿರ್ವಣಾಧಿಕಾರಿ ಕಿಟ್ಟಣ್ಣ ರೈ ಕೆ. ಉಪಸ್ಥಿತರಿದ್ದರು.
ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು.
ಗ್ರಾಮಸ್ಥರು ಆರೋಗ್ಯ ತಪಾಸಣೆಯ ಪಯೋಜನ ಪಡೆದುಕೊಂಡರು.











